ಹುಬ್ಬಳ್ಳಿ : ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಹುಬ್ಬಳ್ಳಿ ವಿದ್ಯಾನಗರದ ಕನಕದಾಸ ಕಾಲೇಜಿನ ಶ್ರಾವಣಿ ಮಾರುತಿ ಕಾಳೆ(18) ಮೃತಪಟ್ಟ ವಿದ್ಯಾರ್ಥಿನಿ.
ಶ್ರಾವಣಿ ಈ ಬಾರಿಯ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ.71 ಫಲಿತಾಂಶ ಪಡೆದಿದ್ದು, ಶೇ.100 ಫಲಿತಾಂಶ ತೆಗೆದುಕೊಳ್ಳುವುದಾಗಿ ಹೇಳಿದ್ದಳು ಎನ್ನಲಾಗಿದೆ.
ತಾನು ನಿರೀಕ್ಷೆ ಮಾಡಿದ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.





