Home Crime ಮಂಗಳೂರು : ಲಾರಿ‌ ಹಾಗೂ ಬೈಕ್ ನಡುವೆ ಅಪಘಾತ : ಯುವಕ‌ ಸಾವು…!!

ಮಂಗಳೂರು : ಲಾರಿ‌ ಹಾಗೂ ಬೈಕ್ ನಡುವೆ ಅಪಘಾತ : ಯುವಕ‌ ಸಾವು…!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಂಪ್‌ವೆಲ್‌ನಲ್ಲಿ ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಮೃತಪಟ್ಟ ಯುವಕ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ನಿವಾಸಿ ಗೋಪಾಲ್ (29) ಎಂದು ತಿಳಿಯಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಅಪಘಾತವಾಗಿದೆ. ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.

ಘಟನೆ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ,ಪರಿಶೀಲನೆ ನಡೆಸಿ, ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.