Home Crime ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿ : ಮಹಿಳೆ ಮೃತ್ಯು…!!

ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿ : ಮಹಿಳೆ ಮೃತ್ಯು…!!

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಗಮ್ ಜಂಕ್ಷನ್ ಸಮೀಪದ ನವಭಾರತ್ ಟಿಂಬರ್ ಎದರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

ಸಾವನ್ನಪ್ಪಿದವರು ಹೊಸಮಠ ಚಾರುಕೊಟ್ಟಿಗೆ ನಿವಾಸಿ ಜಲಜಾ(64) ಎಂದು ಗುರುತಿಸಲಾಗಿದೆ. ಇವರ ಪತಿ ಸ್ಕೂಟರ್ ಸವಾರ ನಾರಾಯಣ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇವರು ಆನಗಳ್ಳಿಯಿಂದ ಚಾರುಕೊಟ್ಟಿಗೆ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದು, ಆಗ ಹಿಂದಿನಿಂದ ಬಂದ ಬಸ್, ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಜಲಜಾ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.