Home Crime ಬ್ರಹ್ಮಾವರ : ರೈಲಿಗೆ ಅಡ್ಡ ಬಂದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ…!!

ಬ್ರಹ್ಮಾವರ : ರೈಲಿಗೆ ಅಡ್ಡ ಬಂದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ…!!

ಬ್ರಹ್ಮಾವರ:ಹನೆಹಳ್ಳಿ ಗ್ರಾಮದ ಕಂಪ ಪ್ರದೇಶದಲ್ಲಿ ಬಾರ್ಕೂರು–ಉಡುಪಿ ರೈಲ್ವೆ ನಿಲ್ದಾಣಗಳ ಮಧ್ಯೆ ಇರುವ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ರೈಲಿಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಿನಾಂಕ 28.01.2026ರ ರಾತ್ರಿ ಸಂಭವಿಸಿದೆ.

ರೈಲ್ವೆ ಹಳಿ ಕಂಬ ಸಂಖ್ಯೆ 676/20 ರಿಂದ 676/22ರ ಕೀ.ಮಿ ಕಂಬದ ನಡುವಿನ ಪ್ರದೇಶದಲ್ಲಿ ಸುಮಾರು 50–55 ವರ್ಷ ಪ್ರಾಯದ ಅಪರಿಚಿತ ಗಂಡಸು, ರಾತ್ರಿ ಸುಮಾರು 01:05 ಗಂಟೆಯ ವೇಳೆ ಚಲಿಸುತ್ತಿದ್ದ ರೈಲಿಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.

ಈ ಕುರಿತು ಬಾರ್ಕೂರು ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಶ್ರೀನಿವಾಸ ಶೆಟ್ಟಿ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ಸಂಖ್ಯೆ 08/2026 ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.