ಉಪ್ಪಿನಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹಾಸನ ಮೂಲದ ಮಂಗಳೂರಿನ ತಲಪಾಡಿ ನಿವಾಸಿ ಅಕ್ಬರ್ ಸೊಹೈಬ್ (24) ಬಂಧಿತ ಆರೋಪಿಯಾಗಿದ್ದಾನೆ.
ಉಪ್ಪಿನಂಗಡಿ ಠಾಣಾ ಪೊಲೀಸ್ ಉಪನಿರೀಕ್ಷರಾದ ಕೌಶಿಕ್ ರವರ ನೇತೃತ್ವದ ಪೊಲೀಸ್ ತಂಡ ಅಗಸ್ಟ್ 4 ರಂದು ಹಾಸನದ ಬಿಟ್ಟಗೌಡನಹಳ್ಳಿ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.
ಆರೋಪಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಉಪ್ಪಿನಂಗಡಿ ಠಾಣೆ ಮಾತ್ರವಲ್ಲದೆ ಬಂಟ್ವಾಳ ನಗರ ಠಾಣೆ, ಉಳ್ಳಾಲ ಪೊಲೀಸ್ ಠಾಣೆ ಹಾಗೂ ಕೇರಳದ ಕನಪ್ಪುರಂ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿ ವಾರೆಂಟ್ ಜಾರಿಯಾಗಿತ್ತು.