ಬೆಳ್ತಂಗಡಿ : ಕಟ್ಟಡವೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ ಗಾಂಜಾವನ್ನು ಪುಂಜಾಲಕಟ್ಟೆ ಪೊಲೀಸರು ಪತ್ತೆಹಚ್ಚಿದ್ದು, ಆರೋಪಿ ಪರಾರಿಯಾಗಿದ್ದಾನೆ. ಈ ಪ್ರಕರಣವನ್ನು ಸದ್ಯ ಬೆಳ್ತಂಗಡಿ ಪೊಲೀಸರಿಗೆ ವರ್ಗಾವಣೆ ಮಾಡಲಾಗಿದೆ.
ಆರೋಪಿಯನ್ನು ಚಿಲಿಂಬಿ ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ. ಆತನ ಮನೆಯಲ್ಲಿ 160 ಗ್ರಾಂ ಗಾಂಜಾ ಶೇಖರಿಸಿ ಇಡಲಾಗಿತ್ತು. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.
ಆರೋಪಿ ರಫೀಕ್ ವಿರುದ್ಧ ಈ ಹಿಂದೆಯೂ ಹಲವಾರು ಗಾಂಜಾ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಇದೆ.