ಉಡುಪಿ : ಭಾರತ ಹವಾಮಾನ ಇಲಾಖೆ, ನವದೆಹಲಿ ಇವರು ನೀಡಿರುವ ಮುನ್ಸೂಚನೆಯ ಪ್ರಕಾರ ಆಗಸ್ಟ್ 6-8 ರವರೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣಕ್ಕಿಂತ ಹೆಚ್ಚು ಮಳೆಯಾಗುವ ಸಂಭವವಿದೆ.
ಆಗಸ್ಟ್ 6 ರಂದು ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿ.ಕೆ.ಎಂ ಎಸ್ ವಿಭಾಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ, ಇಂದು ಮತ್ತೆ ಪ್ರಾರಂಭವಾಗಿದೆ. ಮಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಉಡುಪಿಯಲ್ಲಿ ಸಂಜೆ ಬಳಿಕ ಉತ್ತಮ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಬಿರುಗಾಳಿ ಜೊತೆ ಮಳೆಯಾಗುವ ಸಾಧ್ಯತೆ ಹಿನ್ನಲೆ ಮೀನುಗಾರರಿಗೆ ಅಗಸ್ಟ್ 5 ಮತ್ತು 6 ರಂದು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.