Home Crime ಪುತ್ತೂರು : ಆತ್ಮಹತ್ಯೆಗೆ ಶರಣಾದ ಪಶು ವೈದ್ಯೆ…!!

ಪುತ್ತೂರು : ಆತ್ಮಹತ್ಯೆಗೆ ಶರಣಾದ ಪಶು ವೈದ್ಯೆ…!!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಯುವ ಪಶುವೈದ್ಯೆಯೊಬ್ಬರು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ.

ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಪಶು ವೈದ್ಯೆಯಾಗಿದ್ದ ಡಾ.ಕೀರ್ತನಾ ಜೋಶಿ (27) ಸೋಮವಾರ ರಾತ್ರಿ ಮಂಗಳೂರಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪಶು ವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿದ್ದ ಡಾ. ಕೀರ್ತನಾ ಜೋಶಿ ಅವರು ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ವೈದ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸೋಮವಾರ ತಡರಾತ್ರಿ ಮಂಗಳೂರಿನ ತನ್ನ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ತಿಳಿದುಬಂದಿದೆ.

ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಮೃತರು ತಂದೆ ಗಣೇಶ್ ಜೋಶಿ, ತಾಯಿ ವೀಣಾ ಜೋಶಿ, ಸಹೋದರಿ ಡಾ. ಮೇಘನಾ ಜೋಶಿ ಅವರನ್ನು ಅಗಲಿದ್ದಾರೆ.