ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಮೃತದೇಹಗಳನ್ನು ಹೂತು ಹಾಕಿದ ಘಟನೆಗೆ ಸಂಬಂಧಿಸಿ ದಂತೆ ಧರ್ಮಸ್ಥಳ ಗ್ರಾಮದ ಪಾಂಗಳ ರಸ್ತೆಯ ಸಮೀಪ ಲೈವ್ ವರದಿ ಮಾಡುತ್ತಿದ್ದ ಇಬ್ಬರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿದ್ದಾರೆ.
ಕುಡ್ಲ ರ‍್ಯಾಂಪೇಜ್ ನ ಅಜಯ್ ಅಂಚನ್, ಯುನೈಟಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರ‍್ಯಾಂಪೇಜಿನ ಕ್ಯಾಮೆರಾ ಮೆನ್ ಮೇಲೆ ಬುಧವಾರ ಸಂಜೆಯ ವೇಳೆ ದುಷ್ಕರ್ಮಿಗಖ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ.
ಸುಮಾರು 25ಕ್ಕೂ ಹೆಚ್ಚು ಮಂದಿಯಿದ್ದ ತಂಡ ಇವರ ಮೇಲೆ ಏಕಾಏಕಿ ದಾಳಿ ನಡೆಸಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳೆಲ್ಲರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಜಿರೆಯ ಖಾಸಗಿ ಆಸ್ಪತ್ರೆಯ ಬಳಿ ಸುವರ್ಣ ಚಾನೆಲ್ ನ ವರದಿಗಾರಾದ ಹರೀಶ್, ನವೀನ್ ಪೂಜಾರಿ ಎಂಬವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಒಳಗಾದವರು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆಯ ಬೆನ್ನಲ್ಲಿಯೇ ಧರ್ಮಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿತ್ತು. ನಂತರ ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ಪರಿಸ್ಥಿತಿಯನ್ನು ಹತೋಟಿಗೆ ತಂದರು ಎಂದು ಮಾಹಿತಿ ತಿಳಿಯಲಾಗಿದೆ.
