Home Crime ಘಟನೆಗೆ ಸಂಬಂಧಿಸಿದಂತೆ ವೀಡಿಯೋಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು : ಡಾ.  ಅರುಣ್ ಕೆ….!!

ಘಟನೆಗೆ ಸಂಬಂಧಿಸಿದಂತೆ ವೀಡಿಯೋಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು : ಡಾ.  ಅರುಣ್ ಕೆ….!!

ಬೆಳ್ತಂಗಡಿ: ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಈ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಧರ್ಮಸ್ಥಳ ಗ್ರಾಮದಲ್ಲಿ ಬುಧವಾರ ನಡೆದ ಘಟನೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಹೇಳಿಕೆ ನೀಡಿದ್ದಾರೆ.

ಧರ್ಮಸ್ಥಳದಲ್ಲಿ ನಡೆದ ಯುಟ್ಯೂಬರ್ ಗಳ ಮೇಲಿನ ಹಲ್ಲೆ ಹಾಗು ಉಜಿರೆಯಲ್ಲಿ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದೂರುಗಳನ್ನು ಸ್ವೀಕರಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಅದೇ ರೀತಿ ಧರ್ಮಸ್ಥಳದ ಪಾಂಗಳದಲ್ಲಿ ಹಾಗೂ ಪೋಲಿಸ್ ಠಾಣಾ ಆವರಣದಲ್ಲಿ ಹಾಗೂ ಉಜಿರೆಯ ಖಾಸಗಿ ಆಸ್ಪತ್ರೆಯ ಮುಂದೆ ಕಾನೂನು ಬಾಹಿರವಾಗಿ ಗುಂಪು ಸೇರಿದವರ ವಿರುದ್ದ ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದ ಅವರು, ಹಲ್ಲೆಗೆ ಒಳಗಾಗಿರುವವರು ದಾಖಲಾಗಿರುವ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆಯಲಾಗಿದ್ದು ಯಾವುದೇ ಗಂಭೀರ ಗಾಯಗಳಿಲ್ಲ ಎಂದು ತಿಳಿಸಿದ್ದಾರೆ.


ಬುಧವಾರ ನಡೆದ ಘಟನೆಗೆ ಸಂಬಂಧಿಸಿದಂತೆ ವೀಡಿಯೋಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ ಹೇಳಿದ್ದಾರೆ.