Home Karkala News ಕಾರ್ಕಳ:  ಅಕ್ರಮ ಗಣಿಕಾರಿಕೆ ಮೇಲೆ ಪೊಲೀಸ್ ದಾಳಿ – ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ಕಾರ್ಕಳ:  ಅಕ್ರಮ ಗಣಿಕಾರಿಕೆ ಮೇಲೆ ಪೊಲೀಸ್ ದಾಳಿ – ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ಕಾರ್ಕಳ: ಅಕ್ರಮ ಗಣಿಕಾರಿಕೆ ನಡೆಸುತ್ತಿದ್ದವರ ವಿರುದ್ಧ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ, ಕಲ್ಲು ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಲಾರಿಗಳು ಸೇರಿದಂತೆ ಗಣಿಕಾರಿಕೆ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು ಅರ್ಬಿಪಾದೆ ಪ್ರದೇಶದ ಸರ್ವೇ ನಂ.281ರಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಮುರಳೀಧರ ನಾಯ್ಕ್ ನೇತೃತ್ವದಲ್ಲಿ ಏಪ್ರಿಲ್ 15ರಂದು ಬೆಳಿಗ್ಗೆ 8.20ಕ್ಕೆ ದಾಳಿ ನಡೆಸಲಾಯಿತು.

ದಾಳಿ ವೇಳೆ ಸರಕಾರಿ ಕಲ್ಲುಕೋರೆ ಪ್ರದೇಶದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಿ, ಕಲ್ಲುಗಳನ್ನು ಲಾರಿಗಳಿಗೆ ಲೋಡ್ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದರು.

ಈ ಸಂಬಂಧ ಆರೋಪಿತರಾದ ಮನೋಜ್ ಮತ್ತು ಶರಣ್ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.