Home Latest ನಗರಸಭೆ : ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ನಗರಸಭೆ : ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ (ಶೇ. 24.10) ಪರಿಶಿಷ್ಟ ಜಾತಿಯ ಉಪಯೋಜನೆ (ಎಸ್.ಸಿ.ಎಸ್.ಪಿ) ಅನುದಾನದ ವ್ಯಕ್ತಿ ಸಂಬoಧಿತ ಕಾರ್ಯಕ್ರಮದಡಿ ಮನೆಯ ಮೇಲ್ಛಾವಣಿ ದುರಸ್ಥಿ ಹಾಗೂ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.