ಧಾರವಾಡ,: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ. ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ನೀಡಿದೆ.
ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್ಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ ಹಾಗೂ ಇನ್ನು ಎ 1 ಬಸವರಾಜ ಮುತ್ತಗಿ ಮಾಫಿ ಸಾಕ್ಷಿ ಸ್ಥಾನ ಕೋರ್ಟ್ ಖಚಿತಪಡಿಸಿದೆ. ಇದರ ಜತೆಗೆ ಯೋಗೀಶ್ ಗೌಡರ್ ಮಕ್ಕಳಿಗೆ 16 ಲಕ್ಷ ರೂ ಹಣವನ್ನು ಪರಿಹಾರವಾಗಿ ನೀಡಲು ಸೂಚನೆ ನೀಡಿದೆ.
ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ಪ್ರಕಟಿಸಿದೆ. ಇದೀಗ ಅವರಿಗೆ ಜೀವಾವಧಿ ಶಿಕ್ಷೆ, ಇದರ ಜೊತೆಗೆ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಪ್ರಮುಖ ಆರೋಪಿಯಾಗಿರುವ ಇವರಿಗೆ ನ್ಯಾಯಾಲಯ ಬುದವಾರ (ಏ.15) ಅಪರಾಧಿ ಎಂದು ಘೋಷಣೆ ಮಾಡಿತ್ತು. ಇದೀಗ ಪ್ರಕಟ ಮಾಡಿದೆ.





