Home Karnataka News ಜೀವಾವಧಿ ಶಿಕ್ಷೆಗೆ ಗುರಿಯಾದ ಹಿನ್ನೆಲೆ ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ…!!

ಜೀವಾವಧಿ ಶಿಕ್ಷೆಗೆ ಗುರಿಯಾದ ಹಿನ್ನೆಲೆ ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ…!!

ಬೆಂಗಳೂರು : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆಯನ್ವಯ ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿನ ಪ್ರತಿ ಬಂದ ಕೂಡಲೇ ವಿಧಾನಸಭೆಯ ಕಾರ್ಯದರ್ಶಿ ನಿಯಮದಂತೆ ಶಾಸಕರ ಅನರ್ಹತೆ ಕುರಿತು ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಗಳಿವೆ.

ಧಾರವಾಡ ಕ್ಷೇತ್ರದ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಿನಯ್ ಕುಲಕರ್ಣಿ, ಒಮ್ಮೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.