ಉಡುಪಿ : ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ರಾಜ್ಯಸಭಾ ಸದಸ್ಯೆ, ಇನ್ಫೋಸಿಸ್ ಫೌಂಡೇಶನ್ ಪ್ರವರ್ತಕಿ ಡಾ.ಸುಧಾ ಮೂರ್ತಿ ಅವರಿಗೆ ಶನಿವಾರ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.
ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.
ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನಾಚಾರ್ಯ ಇದ್ದರು. ಡಾ.ಗೋಪಾಲಾಚಾರ್ ನಿರೂಪಿಸಿದರು.