Home Dskshina Kannada ಪುತ್ತೂರಿನಲ್ಲಿ ಭೀಕರ ಬೈಕ್ ಅಪಘಾತ : ಯುವಕ ಸ್ಥಳದಲ್ಲೇ ಮೃತ್ಯು : ಇಬ್ಬರಿಗೆ ಗಾಯ..!

ಪುತ್ತೂರಿನಲ್ಲಿ ಭೀಕರ ಬೈಕ್ ಅಪಘಾತ : ಯುವಕ ಸ್ಥಳದಲ್ಲೇ ಮೃತ್ಯು : ಇಬ್ಬರಿಗೆ ಗಾಯ..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪಡೀಲ್ ಸಮೀಪ ಎರಡು ಬೈಕ್‌ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಒರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಯುವಕನನ್ನು ಬೆಳ್ಳಿಪ್ಪಾಡಿ ಕೊಡಿಮರದ ವಿಶ್ವನಾಥ ಪೂಜಾರಿ ಅವರ ಪುತ್ರ ಧನರಾಜ್ (21) ಎಂದು ಗುರುತಿಸಲಾಗಿದೆ.

ಒಂದು ಬೈಕ್ ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದರೆ, ಇನ್ನೊಂದು ಬೈಕ್ ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುತ್ತಿತ್ತು. ಈ ವೇಳೆ ಉಪ್ಪಿನಂಗಡಿ ಕಡೆಗೆ ಸಾಗುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು, ಬಳಿಕ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಬಡಿದಿದ್ದು, ಧನರಾಜ್ ಅವರ ತಲೆಗೆ ತೀವ್ರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊಂದು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದು, ಸ್ಥಳೀಯರ ಸಹಕಾರದಿಂದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.