ರಾಜ್ಯದಲ್ಲಿ ಹಾಗೂ ದೇಶಾದ್ಯಂತ ಲವ್ ಜಿಹಾದ್ ನಂತಹ ಪ್ರಕರಣಗಳು ಯಥೇಚ್ಛವಾಗಿ ಬೆಳಕಿಗೆ ಬರುತ್ತಿವೆ. ಜೊತೆಗೆ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಮದುವೆಯಾಗುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹಿಂದು ಯುವಕ ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷವನ್ನು ನೀಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಮುಸ್ಲಿಂ ಯುವತಿ ಪ್ರೀತಿಸಿ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಜತೆಗೂಡಿ ಭೇಟಿ ನೀಡಿ ಸಾಂತ್ವನ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ”ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದೆ. ಸಿದ್ದರಾಮಯ್ಯ ಸರ್ಕಾರ ಅಹಿಂದ ಸರ್ಕಾರ ಎಂದೆನ್ನುತ್ತಿದೆ. ಆದರೆ ರಾಜ್ಯದಲ್ಲಿ ಅಹಿಂದ ಅಲ್ಲ, ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತಿದೆ. ಯಾರೂ ಮುಸ್ಲಿಂ ಯುವತಿಯರನ್ನು ಪ್ರೀತಿ ಮಾಡಬಾರದಾ ? ಅವರನ್ನು ಮದುವೆ ಆಗಬಾರದೆಂದು ಏಲ್ಲಿದೆ ? ಇನ್ಮುಂದೆ ನಾವು ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವೆವು ಎನ್ನುವ ಅಭಿಯಾನ ಆರಂಭಿಸಲಿದ್ದೇವೆ ಎಂದು ಹೇಳಿದರು.
ಅಲ್ಲದೆ ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಮರಲ್ಲಿದೆ. ರೀಲ್ಸ್ ನಲ್ಲಿ ಮಚ್ಚು ತೋರಿಸಿದ್ದಾನೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಗವಿಸಿದ್ದಪ್ಪ ಪ್ರೀತಿಸಿದ್ದ ಹುಡುಗಿಯನ್ನು ಕೂಡ ಬಂಧಿಸಬೇಕು. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಸದನದಲ್ಲಿ ವಿಷಯ ಪ್ರಸ್ತಾಪಿಸುತ್ತೇನೆ. ಮಚ್ಚು ತೆಗೆದುಕೊಂಡು ಓಡುವಡುವವರಿಗೆ ರಾಜ್ಯ ಸರ್ಕಾರದ ಬೆಂಬಲ ಇದೆ ಎಂದು ಟೀಕಿಸಿದ್ದಾರೆ.