Home Karavali Karnataka ಮಂಗಳೂರು : ಈಜುವಿನಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿದ್ದ ಚಂದ್ರಶೇಖರ್ ರೈ ಸೂರಿಕುಮೇರು...

ಮಂಗಳೂರು : ಈಜುವಿನಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿದ್ದ ಚಂದ್ರಶೇಖರ್ ರೈ ಸೂರಿಕುಮೇರು ಮೃತ್ಯು…!!

ಮಂಗಳೂರು : ಈಜುಕೊಳದಲ್ಲಿ ಉಸಿರು ಕಟ್ಟಿಕೊಂಡು ಒಂದು ನಿಮಿಷ ಎರಡು ಸೆಕೆಂಡ್ ಕಾಲ ಮುಮ್ಮುಖವಾಗಿ 29 ತಿರುವುಗಳನ್ನು ಹಾಕಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದ ಖ್ಯಾತ ಈಜುಪಟು ಕೆ. ಚಂದ್ರಶೇಖರ್ ರೈ ಸೂರಿಕುಮೇರು ಭಾನುವಾರ ನಿಧನರಾಗಿದ್ದಾರೆ.

ಮಂಗಳೂರಿನ ಲೇಡಿಹಿಲ್‌ನಲ್ಲಿರುವ ಪಾಲಿಕೆಯ ಈಜುಕೊಳದಲ್ಲಿ ಭಾನುವಾರ ಹಿನ್ನಲೆ ನಿರ್ವಹಣೆ ಕೆಲಸ ನೆಡಯುತ್ತಿತ್ತು. ಈ ವೇಳೆ ಈಜುಕೊಳದಲ್ಲಿ ಮುಳುಗಿ ಕೆಲಸ ಮಾಡುತ್ತಿರುವ ವೇಳೆ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ.

ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) 2023ರಲ್ಲಿ ಈಜುಕೊಳದ ನೀರಿನೊಳಗೆ ಒಂದು ನಿಮಿಷದಲ್ಲಿ 28 ಬಾರಿ ಸಮ್ಮರ್‌ಸಾಲ್ಟ್ ಎಂಬ ಸ್ಟಂಟ್ ಮಾಡಿ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದಿದ್ದರು. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಮಂಗಳೂರು ಪಾಲಿಕೆಯ ಈಜುಕೋಳದಲ್ಲಿ ಲೈಫ್ ಗಾರ್ಡ್ ಮತ್ತು ತರಭೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.