ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರಕನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್ (28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್ (26) ಎಂದು ಗುರುತಿಸಲಾಗಿದೆ.
ಆರೋಪಿಗಳು ಏಪ್ರಿಲ್ 16ರಂದು ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಸಮೀಪದ ಕಾಡಿಗೆ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಘಟನೆಯ ಕುರಿತು ಬಾಲಕಿಯು ತನ್ನ ಮನೆಯವರಿಗೆ ಮಾಹಿತಿ ನೀಡಿದ್ದಾಳೆ. ಪೋಷಕರು ಏಪ್ರಿಲ್ 17ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೋಷಕರ ದೂರಿನನ್ವಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರ ಮೇಲೆ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡ ಕಾರ್ಯಚರಣೆ ನಡೆಸಿತ್ತು.
ಈ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾದ ಓರ್ವ ಆರೋಪಿ ಕಡುರುದ್ಯಾವರ ಗ್ರಾಮದ ಸುಮಂತ್ ಗೆ ಮೇ 10ರಂದು ಮದುವೆ ಕಾರ್ಯಕ್ರಮ ನಿಗದಿಯಾಗಿತ್ತು.





