ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪ್ರತಿಕಾ ಭವನದ ಸಹಯೋಗದೊಂದಿಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಎ.21ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಘದ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಎಲ್ಲಾ ಪತ್ರಕರ್ತರು ಭಾಗವಹಿಸಿ ಅಗಲಿದ ಚೇತನಕ್ಕೆ ನುಡಿನಮನ ಸಲ್ಲಿಸುವಂತೆ ಕೋರಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಜಿ ಕುರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





