ಮೂಡಬಿದ್ರೆ : ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಮಿಜಾರು ಗ್ರಾಮದ ನಿವಾಸಿ ಕೆ. ಅಬ್ದುಲ್ ಬಶೀರ್ ಯಾನೆ ಅರ್ಗ ಬಶೀರ್ ಬಂಧಿತ ಆರೋಪಿಯಾಗಿದ್ದು ಈತನ ವಿರುದ್ಧ ಮಂಗಳೂರು ನಗರ, ದ.ಕ ಜಿಲ್ಲೆ ಚಿಕ್ಕಮಗಳೂರು ಜಿಲ್ಲೆ ಗಳಲ್ಲಿ ಸುಮಾರು 17 ಪ್ರಕರಣಗಳು ದಾಖಲಾಗಿವೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 4 ವರ್ಷಗಳಿಂದ ತಲೆ ಮರಿಸಿಕೊಂಡಿದ್ದು, ಈತನ ವಿರುದ್ಧ ನ್ಯಾಯಾಲಯವು ದಸ್ತಗಿರಿ ವಾರೆಂಟ್, ಉದ್ಗೋಷಣ ವಾರೆಂಟ್ ಹೊರಡಿಸಿತ್ತು.
ಬಂಧನ ಭೀತಿಯಿಂದ ಈತ ಮೂಡಬಿದ್ರೆ ತಾಲೂಕು ತೆಂಕ ಮಿಜಾರು ಗ್ರಾಮದ ಆರ್ಗ ಮನೆಯನ್ನು ತನ್ನ ಕುಟುಂಬದೊಂದಿಗೆ ಬಿಟ್ಟು, ದ.ಕ ಜಿಲ್ಲೆಯ ಬಂಟ್ವಾಳ ತಾಲೂಕು ಬಿಸಿ ರೋಡ್ ನ ಪರ್ಲಿಯಾ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ಖಚಿತ ಮಾಹಿತಿ ಮೇರೆಗೆ ದಿನಾಂಕ: 18-04-2026 ರಂದು 7.30 ಗಂಟೆಗೆ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್, ಪರ್ಲಿಯ ಎಂಬಲ್ಲಿ ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರಿಸಿಕೊಂಡ ಕಾರಣ ಈತನ ವಿರುದ್ಧ ಮೂಡಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ದಸ್ತಗಿರಿ ಮಾಡಲಾಗಿದೆ.
ಆರೋಪಿ ಅಬ್ದುಲ್ ಬಶೀರ್ ಯಾನೆ ಆರ್ಗ ಬಶೀರ್ ಎಂಬಾತನ ವಿರುದ್ಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ 7, ಬಜ್ಪೆ ಪೊಲೀಸ್ ಠಾಣೆಯಲ್ಲಿ 5, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ , ಧರ್ಮಸ್ಥಳ ಪೊಲೀಸ್ ಠಾಣೆ , ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಹಾಗೂ ಚಿಕ್ಕಮಗಳೂರಿನ ಕಳಸ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.





