ಶಿವಮೊಗ್ಗ : ದೇವಸ್ಥಾನಕ್ಕೆ ಬಂದಿದ್ದ ಅವಿವಾಹಿತ ಮಹಿಳೆಯೊಬ್ಬರು, ಅಲ್ಲಿಯೇ ಮಗುವಿಗೆ ಜನ್ಮ ನೀಡಿದಂತಹ ವಿಚಿತ್ರ ಘಟನೆಯನ್ನು ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ.
ಹೌದು, ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ರೇಣುಕಾಂಬೆ ಸನ್ನಿಧಿಯಲ್ಲಿ ನೂಲಹುಣ್ಣಿಮೆ ಪ್ರಯುಕ್ತ ಆಗಮಿಸಿದ ಅವಿವಾಹಿತ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾಳೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಯುವತಿ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ. ತಕ್ಷಣ ಭಕ್ತರು ಆoಬುಲೆನ್ಸ್ ಮೂಲಕ ಸೊರಬ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಗೆ ಇನ್ನೂ ಮದುವೆಯಾಗಿಲ್ಲ ಎಂಬ ಮಾಹಿತಿ ತಿಳಿದ ವೈದ್ಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.