ಬೆಂಗಳೂರು : ಕನ್ನಡ ಚಿತ್ರರಂಗದ ಹೆಸರಾಂತ ನಟ ದರ್ಶನ್ ಜಾಮೀನು ರದ್ದು ಆಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಸುಪ್ರೀಂ ಕೋರ್ಟ್ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ರದ್ದು ಮಾಡಿದೆ.
ಕನ್ನಡಿಗ & ಚಾಲೆಂಜಿಂಗ್ ಸ್ಟಾರ್ ಅಂತಾ ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇಂದು ಭೀಕರ ಆಘಾತ ನೀಡಿದೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಹವಾ ಎಬ್ಬಿಸಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಸರು ಮಂಡ್ಯ & ಇಂಡಿಯಾ ಮಾತ್ರವಲ್ಲ ಇಡೀ ಜಗತ್ತಿನಲ್ಲಿ ಅಬ್ಬರಿಸುತ್ತಿದೆ ಅಂತಿದ್ದರು ಅಭಿಮಾನಿಗಳು.
ಇದೇ ಕಾರಣಕ್ಕೆ ಡೆವಿಲ್ ಸಿನಿಮಾ ರಿಲೀಸ್ ದೊಡ್ಡ ಮಟ್ಟದಲ್ಲಿ ಅಬ್ಬರಿಸುವುದು ಗ್ಯಾರಂಟಿ ಅಂತ ಕಾಯುತ್ತಿದ್ದರು ಫ್ಯಾನ್ಸ್. ಇಂತಹ ಸಮಯದಲ್ಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಜಾಮೀನು ರದ್ದು, 287 ದಿನಗಳ ನಂತರ ಬಳ್ಳಾರಿ ಜೈಲಿಗೆ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ನಟ ದರ್ಶನ್ ಅವರಿಗೆ ನಿಯಮಿತ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಿತು. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠವು ತೀರ್ಪು ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್, ಪವಿತ್ರಾಗೌಡ ಹಾಗೂ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾ.ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆದಿತ್ತು. ವಾದ, ಪ್ರತಿವಾದ ಆಲಿಸಿದ್ದ ಪೀಠ ಆದೇಶವನ್ನು ಕಾಯ್ದಿರಿಸಿತ್ತು.

