Home Crime ಲಂಚ ಸ್ವೀಕಾರ : ಪಿಎಸ್ಐ, ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ…!!

ಲಂಚ ಸ್ವೀಕಾರ : ಪಿಎಸ್ಐ, ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ…!!

ಬಾಗಲಕೋಟೆ : ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ ವೇಳೆ, ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಮತ್ತು ಕಾನ್‌ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಬಂಧಿತರನ್ನು ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಪೇದೆ ಸಂತೋಷ್ ಬಿರಾದರ್ ಎಂದು ಗುರುತಿಸಲಾಗಿದೆ.

ಇವರಿಬ್ಬರೂ ಒಬ್ಬ ಆರೋಪಿಯನ್ನು ಪ್ರಕರಣದಿಂದ ಕೈಬಿಡುವ ಹಾಗೂ ಆತನ ಬೈಕ್ ಬಿಡುಗಡೆ ಮಾಡುವ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದಾಗಿ ಆರೋಪಿಸಲಾಗಿದೆ.

ಜೂಜಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ವ್ಯಕ್ತಿಗೆ ಸಹಾಯ ಮಾಡುವುದಾಗಿ ಹೇಳಿ ಅಧಿಕಾರಿಗಳು ಸುಮಾರು 2 ಲಕ್ಷ ರೂ. ಲಂಚ ಕೇಳಿದ್ದರು. ಈ ಕುರಿತು ಮುತ್ತಪ್ಪ ನಾಯ್ಕರ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಈ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ತಂಡ, ಫೋನ್ ಕರೆಗಳ ರೆಕಾರ್ಡಿಂಗ್ ಸೇರಿದಂತೆ ಸಾಕ್ಷ್ಯಗಳನ್ನು ಸಂಗ್ರಹಿಸಿ, ಆರೋಪಿಗಳು 1.70 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ಬಂಧಿತ ಪಿಎಸ್ಐ, ಕಾನ್‌ಸ್ಟೇಬಲ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ವಿಚಾರಣೆ ಮುಂದುವರಿದಿದೆ.