Home Crime ಮಂಗಳೂರು: ಹವ್ಯಾಸಿ ರಂಗಭೂಮಿ ಕಲಾವಿದ ಮಿಥುನ್‌ ಪೂಜಾರಿ ಆತ್ಮಹತ್ಯೆ…!!

ಮಂಗಳೂರು: ಹವ್ಯಾಸಿ ರಂಗಭೂಮಿ ಕಲಾವಿದ ಮಿಥುನ್‌ ಪೂಜಾರಿ ಆತ್ಮಹತ್ಯೆ…!!

ಬಂಟ್ವಾಳ: ಮಂಚಿ ಎಂಬಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಉಳ್ಳಾಲ ತಾಲೂಕಿನ ಇರಾ ಗ್ರಾಮದ ಪಾತ್ರಾಡಿ ನಿವಾಸಿ ಮಿಥುನ್ ಪೂಜಾರಿ (10) ಮೃತಪಟ್ಟ ವ್ಯಕ್ತಿ.

ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದ ಮಿಥುನ್ ಪೂಜಾರಿ ಅವರು ರಂಗಭೂಮಿ ಚಟುವಟಿಕೆಗಳಲ್ಲಿ ಬಹಳ ಸಕ್ರಿಯರಾಗಿದ್ದರು. ಇತ್ತೀಚೆಗಷ್ಟೇ ಇರಾ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸಿದ್ದ ಅವರು ಅಲ್ಲಿಗೆ ವಾಸ್ತವ್ಯ ಬದಲಿಸಿದ್ದರು. ಆದರೆ, ಮಂಚಿ ಸಮೀಪವಿದ್ದ ತಮ್ಮ ಹಳೆಯ ಮನೆಯ ತೋಟಕ್ಕೆ ನೀರುಣಿಸುವ ಕೆಲಸಕ್ಕಾಗಿ ಅವರು ಆಗಾಗ ಭೇಟಿ ನೀಡುತ್ತಿದ್ದರು.

ಅದರಂತೆ ಬೆಳಿಗ್ಗೆ ಮನೆಯಿಂದ ಹೊರಟಿದ್ದ ಮಿಥುನ್, ಸಂಜೆಯಾದರೂ ವಾಪಸ್‌ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಮತ್ತು ಸ್ಥಳೀಯರು ಹಳೆಯ ಮನೆಗೆ ತೆರಳಿ ಪರಿಶೀಲಿಸಿದಾಗ, ಅವರು ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಸ್ಥಳೀಯವಾಗಿ ಹಲವು ನಾಟಕ ತಂಡಗಳಲ್ಲಿ ನಟಿಸಿದ್ದ ಮಿಥುನ್ ಪೂಜಾರಿ ಅವರು ಉತ್ತಮ ಅಭಿನಯದ ಮೂಲಕ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಹಾಗೂ ಎರಡು ವರ್ಷದ ಪುಟ್ಟ ಮಗುವನ್ನು ಅಗಲಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.