Home Latest ಕುಸಿದುಬಿದ್ದ ಅಪರಿಚಿತ ಸಾವು : ಸೂಚನೆ

ಕುಸಿದುಬಿದ್ದ ಅಪರಿಚಿತ ಸಾವು : ಸೂಚನೆ

ಉಡುಪಿ : ಹಳೆ ಸರಕಾರಿ ಬಸ್ಸು ನಿಲ್ದಾಣ ಸನಿಹದ, ಶಾಂಭವಿ ವಸತಿ ಗೃಹದ ಬಳಿ, ಕುಸಿದುಬಿದ್ದ ವ್ಯಕ್ತಿಯೊಬ್ಬರು, ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ರಸ್ತೆ ಬಳಿ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ‌ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರಿಂದ ವ್ಯಕ್ತಿ ಅದಾಗಲೇ ಮೃತಪಟ್ಟಿರುವುದು ತಿಳಿದುಬಂದಿತು.

ಮೃತರ ಹೆಸರು ವಿಳಾಸ ತಿಳಿದುಬಂದಿಲ್ಲ. ಮೃತ ವ್ಯಕ್ತಿ ಗಡ್ಡಧಾರಿಯಾಗಿದ್ದು, 60 ವರ್ಷ ಪ್ರಾಯ ಅಂದಾಜಿಸಲಾಗಿದೆ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ವಾರಸುದಾರರು ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.