ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ 1ನೇ ಮತ್ತು 2ನೇ ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗಿದೆ.
ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಕುರಿತು ಮಹತ್ವದ ಆದೇಶ ನೀಡಿದೆ.
2023ರ ನವೆಂಬರ್ 6ರಂದು ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ರಾತ್ರಿ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿದ್ದರು.
ಈ ಪ್ರಕರಣದಲ್ಲಿ ಪಡೀಲು ನಿವಾಸಿ ಮನೀಶ್, ಕೃಷ್ಣನಗರದ ಚೇತನ್ ಸೇರಿದಂತೆ ಇನ್ನಿತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಇದಕ್ಕೂ ಮೊದಲು ಇವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಕೂಡ ತಿರಸ್ಕರಿಸಿತ್ತು. ಇದೀಗ ಮತ್ತೊಮ್ಮೆ ಜಾಮೀನು ಕೋರಿ ಸಲ್ಲಿಸಿದ್ದ 1ನೇ ಆರೋಪಿ ಮನೀಶ್ ಮತ್ತು 2ನೇ ಆರೋಪಿ ಚೇತನ್ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಇನ್ನು, ಈ ಪ್ರಕರಣದ 3ನೇ ಮತ್ತು 4ನೇ ಆರೋಪಿಗಳಿಗೆ ಈಗಾಗಲೇ ಷರತ್ತುಬದ್ದ ಜಾಮೀನು ಮಂಜೂರು ಮಾಡಲಾಗಿದೆ.





