ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತಪಟ್ಟವರು ಯೋಗೀಶ್ ಕರ್ಕೆರಾ ಎಂದು ತಿಳಿದು ಬಂದಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ಸಾರಾಂಶ : ಪಿರ್ಯಾದಿ ಮಲ್ಲಿಕಾ ಉಮೇಶ್ ಪೂಜಾರಿ (42) ಉಳಿಯಾರಗೋಳಿ ಗ್ರಾಮ, ಕಾಪು ತಾಲೂಕು ಇವರ ಅಣ್ಣ ಯೋಗೀಶ್ ಕರ್ಕೆರಾ ರವರು ತನ್ನ ತಾಯಿಯೊಂದಿಗೆ ಉಡುಪಿ ತಾಲೂಕು ಉದ್ಯಾವರ ಗ್ರಾಮದ ಸಾಲ್ಮರ ಎಂಬಲ್ಲಿರುವ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, ಉಡುಪಿಯ ಹೊಟೇಲ್ ನಲ್ಲಿ ವೇಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಕಳೆದ ಏಳೆಂಟು ತಿಂಗಳಿನಿಂದ ಕೆಲಸ ಬಿಟ್ಟು ಮನೆಯಲ್ಲೆ ಇರುವುದಾಗಿದೆ. ದಿನಾಂಕ: 16-08-2025 ರಂದು ಸಂಜೆ 6.15 ಗಂಟೆಗೆ ಮನೆಯಲ್ಲಿರುವ ಸಮಯ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಅವರನ್ನು ಚಿಕಿತ್ಸೆಯ ಬಗ್ಗೆ ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಟಿ.ಎಮ್.ಎ ಪೈ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ 10.27 ಗಂಟೆಗೆ ಯೋಗೀಶ ಕರ್ಕೆರಾ ರವರು ಮೃತಪಟ್ಟಿರುತ್ತಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 29/2025 ಕಲಂ:194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.