Home Crime ಅನೈತಿಕ ಸಂಬಂಧದ ಹಿನ್ನೆಲೆ ಈರುಳ್ಳಿ ವ್ಯಾಪಾರಿ ಬರ್ಬರ ಹತ್ಯೆ, ಆರೋಪಿ ಬಂಧನ..!!

ಅನೈತಿಕ ಸಂಬಂಧದ ಹಿನ್ನೆಲೆ ಈರುಳ್ಳಿ ವ್ಯಾಪಾರಿ ಬರ್ಬರ ಹತ್ಯೆ, ಆರೋಪಿ ಬಂಧನ..!!

ಬೆಂಗಳೂರು : ಮಹಿಳೆಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಈರುಳ್ಳಿ ವ್ಯಾಪಾರಿ ಬರ್ಬರವಾಗಿ ಹತ್ಯೆಯಾಗಿದ್ದಾನೆ.

ರಾಮಚಂದ್ರ ರೆಡ್ಡಿ ಕೊಲೆಯಾದ ವ್ಯಕ್ತಿ. ಬೆಂಗಳೂರಿನ ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ.

ತಮಿಳುನಾಡು ಮೂಲದ ರಾಮಚಂದ್ರ ರೆಡ್ಡಿ ಈರುಳ್ಳಿ ವ್ಯಾಪಾರಿಯಾಗಿದ್ದು ವ್ಯಾಪಾರಕ್ಕೆಂದು ಬೆಂಗಳೂರಿಗೆ ಮಹಿಳೆಯೊಬ್ಬರ ಪರಿಚಯವಾಗಿ ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು. ಬಳಿಕ ಬೆಂಗಳೂರಿಗೆ ಬಂದಾಗೆಲ್ಲಾ ಮಹಿಳೆಯ ಮನೆಗೆ ಹೋಗಿ ಬರ್ತಿದ್ದ. ಅದರಂತೆ ಏಪ್ರಿಲ್ 25ರಂದು ಸಹ ಮಹಿಳೆಯ ಮನೆಗೆ ತೆರಳಿದ್ದ ವೇಳೆ ಬರ್ಬರವಾಗಿ ಹತ್ಯೆಯಾಗಿದ್ದಾನೆ.

 

ಮಹಿಳೆಯ ಹೊಸ ಪ್ರಿಯಕರ ಹರೀಶ್, ಎನ್ನುವಾತನೇ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

 

ಈರುಳ್ಳಿ ವ್ಯಾಪಾರಿಯಾಗಿದ್ದ ತಮಿಳುನಾಡು ಮೂಲದ ರಾಮಚಂದ್ರ ರೆಡ್ಡಿ, ವ್ಯಾಪಾರಕ್ಕೆಂದು ಬೆಂಗಳೂರಿಗೆ ಬರುತ್ತಿದ್ದ. ಆ ಸಂದರ್ಭದಲ್ಲಿ ರಾಮಚಂದ್ರ ರೆಡ್ಡಿಗೆ ಮಹಿಳೆಯೊಬ್ಬರ ಪರಿಚಯವಾಗಿದ್ದು, ಬಳಿಕ ಇಬ್ಬರ ಸ್ನೇಹ ಅನೈತಿಕ ಸಂಬಂಧಕ್ಕೆ ತಿರುಗಿತ್ತು. ಹೀಗಾಗಿ ಬೆಂಗಳೂರಿಗೆ ಬಂದಾಗೆಲ್ಲ ಮಹಿಳೆಯ ಮನೆಗೆ ಹೋಗಿ ಬರುತ್ತಿದ್ದ. ಈ ನಡುವೆ ಮಹಿಳೆಗೆ ಹರೀಶ್ ಎಂಬಾತನ ಪರಿಚಯವಾಗಿದ್ದು, ಇಬ್ಬರ ಮಧ್ಯೆ ಪ್ರೀತಿ ಕೂಡ ಶುರು ಆಗಿದೆ. ಆದ್ರೆ ಇತ್ತೀಚೆಗೆ ರಾಮಚಂದ್ರ ರೆಡ್ಡಿ ಬಂದು ಹೋಗುವುದು ಹರೀಶ್ ಗೆ ಗೊತ್ತಾಗಿದ್ದು, ಪ್ರೇಯಸಿಯ ಸಂಬಂಧವನ್ನ ಸಹಿಸದೆ ಆಕ್ರೋಶಗೊಂಡಿದ್ದ. ಅಲ್ಲದೇ ಇದಕ್ಕೆ ಅಂತ್ಯಹಾಡಬೇಕೆಂದು ಪ್ಲ್ಯಾನ್ ಮಾಡಿದ್ದ.

 

ಈ ಸಂದರ್ಭದಲ್ಲಿ ರಾಮಚಂದ್ರ ರೆಡ್ಡಿ ಸಹ ನಿನ್ನೆ ಮಹಿಳೆಯ ಮನೆಗೆ ಬಂದಿದ್ದು, ಬಳಿಕ ಅಲ್ಲೇ ಇದ್ದ ದೇವಸ್ಥಾನವೊಂದರ ಬಳಿ ಮಲಗಿದ್ದ. ಇದೇ ಸಮಯಕ್ಕೆ ಮಹಿಳೆಯ ಪ್ರಿಯಕರ ಹರೀಶ್ ಬಂದು ರಾಮಚಂದ್ರ ರೆಡ್ಡಿ ಮೇಲೆ ಕಲ್ಲು ಎತ್ತಿ ಹಾಕಿ ಕೊಂದಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕಾಡುಗೋಡಿ ಪೊಲೀಸರು, ಹಂತಕ ಹರೀಶ್​​ನನ್ನು ಅರೆಸ್ಟ್ ಮಾಡಿದ್ದಾರೆ.