Home Kundapura News ಕೋಟ:  ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!

ಕೋಟ:  ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!

ಕೋಟ: ಬ್ರಹ್ಮಾವರ ತಾಲೂಕಿನ ನಂಚಾರು ಗ್ರಾಮದ ನಿವಾಸಿ ಹರೀಶ (27) ಅವರ ತಾಯಿ (65) ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಮೃತ ಮಹಿಳೆ ಮನೆಯಲ್ಲಿ ಗೇರು ಬೀಜ ಕಟ್ಟಿಂಗ್ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲ ದಿನಗಳಿಂದ ಮಾನಸಿಕವಾಗಿ ಬೇಸರಗೊಂಡು ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ದಿನಾಂಕ 24.04.2026ರ ರಾತ್ರಿ 11.30 ಗಂಟೆಯಿಂದ 25.04.2026ರ ಬೆಳಿಗ್ಗೆ 6.00 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.