ಶಿರ್ವ: ಕಾಪು ತಾಲೂಕು ಶಿರ್ವ ಗ್ರಾಮದ ತೊಟ್ಲಗುರಿ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಘಟನೆ ಪೊಲೀಸರ ಗಸ್ತಿನ ವೇಳೆ ಬೆಳಕಿಗೆ ಬಂದಿದೆ.
ದಿನಾಂಕ 25.04.2026 ರಂದು ಶಿರ್ವ ಪೊಲೀಸ್ ಠಾಣೆಯ ಶಿವಾನಂದಪ್ಪ ಗಸ್ತು ಕರ್ತವ್ಯದಲ್ಲಿದ್ದಾಗ ಮಧ್ಯಾಹ್ನ 12.30ರ ಸುಮಾರಿಗೆ ಬಾತ್ಮೀದಾರರಿಂದ ಬಂದ ಮಾಹಿತಿಯ ಮೇರೆಗೆ ತೊಟ್ಲಗುರಿ ಪ್ರದೇಶಕ್ಕೆ ತೆರಳಿದರು. ಅಲ್ಲಿ ಸರಕಾರಿ ಜಾಗದಲ್ಲಿ ಕರುಣಾಕರ ಎಂಬಾತನು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದು ಪತ್ತೆಯಾಯಿತು.
ಸ್ಥಳದಲ್ಲಿದ್ದ ಕರುಣಾಕರನನ್ನು ವಿಚಾರಿಸಿದಾಗ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆದಿಲ್ಲವೆಂಬುದು ತಿಳಿದುಬಂದಿದೆ. ಇದರಿಂದಾಗಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಿ ಕಲ್ಲು ಕಳವು ಮಾಡಿರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಕರುಣಾಕರ ವಿರುದ್ಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.





