Home Crime ಮಲ್ಪೆ : ಕಳ್ಳತನ ಪ್ರಕರಣ : 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಮಲ್ಪೆ : ಕಳ್ಳತನ ಪ್ರಕರಣ : 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮಂಗಳೂರು ನಿವಾಸಿ ಮೊಹಮ್ಮದ್‌ ಸಮೀರ್ ಎಂದು ಗುರುತಿಸಲಾಗಿದೆ.

ಪ್ರಕರಣದ ಸಾರಾಂಶ : ಮಲ್ಪೆ ಪೊಲೀಸ್ ಠಾಣೆಯ ಅಪರಾಧ ಕ್ರಮಾಂಕ : 124/2011 ಕಲಂ:379 IPCಯ ಕಳ್ಳತನ ಪ್ರಕರಣದಲ್ಲಿ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ಸಮೀರ್ ತಂದೆ : ಮೂಸಬ್ಬ ವಾಸ ಜಪ್ಪು ಮಾರ್ಕೆಟ್, ಮಂಗಳೂರು ಎಂಬಾತನನ್ನು ಮಲ್ಪೆ ಪೊಲೀಸ್ ಉಪನಿರೀಕ್ಷಕ ಅನೀಲಕುಮಾರ ಸಿಬ್ಬಂದಿಯವರಾದ ಸುರೇಶ್, ವಿಶ್ವನಾಥ, ಕುಬೇರ ರವರು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ದಿನಾಂಕ 17/08/2025 ಮಾನ್ಯ PCJ & CJM ನ್ಯಾಯಾಲಯಕ್ಕೆ ಹಾಜರಪಡಿಸಿದ್ದು, ಮಾನ್ಯ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿರುತ್ತಾರೆ.