ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಉನ್ಮೇಶ ಎಂಬಾತನನ್ನು, ಬೆಳ್ಳಾರೆ ಠಾಣಾ ಪೊಲೀಸರು ಕೇರಳ ರಾಜ್ಯದಲ್ಲಿ ದಸ್ತಗಿರಿ ಮಾಡಿ, ಆಗಸ್ಟ್ 17ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.
ಮಾನ್ಯ ನ್ಯಾಯಾಲಯವು ಆರೋಪಿ ಉನ್ಮೇಶನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.