Home Latest ಉಡುಪಿ ಜಿಲ್ಲೆಯಲ್ಲಿ ಮರಳು ಓವರ್‌ಲೋಡಿಂಗ್ ವಿರುದ್ಧ ವಿಶೇಷ ಕಾರ್ಯಾಚರಣೆ..!!

ಉಡುಪಿ ಜಿಲ್ಲೆಯಲ್ಲಿ ಮರಳು ಓವರ್‌ಲೋಡಿಂಗ್ ವಿರುದ್ಧ ವಿಶೇಷ ಕಾರ್ಯಾಚರಣೆ..!!

ಉಡುಪಿ ಜಿಲ್ಲೆಯಲ್ಲಿ ಮರಳು ಸಾಗಾಣಿಕೆಯಲ್ಲಿ ಹೆಚ್ಚುವರಿ ಬಾರ (ಓವರ್‌ಲೋಡಿಂಗ್) ಮಾಡುತ್ತಿರುವ ವಾಹನಗಳ ವಿರುದ್ಧ ದಿನಾಂಕ 25-04-2026 ರಂದು ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಾಚರಣೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು ಸುಮಾರು 13 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಎಲ್ಲಾ ವಾಹನಗಳನ್ನು ಮುಂದಿನ ಕ್ರಮಕ್ಕಾಗಿ ಮೈನ್ಸ್ ಅಂಡ್ ಜಿಯಾಲಜಿ ಇಲಾಖೆಗೆ ಹಸ್ತಾಂತರಿಸಲಾಗಿದೆ.