Home Crime ಉಡುಪಿ : ದ್ವೇಷ ಭಾಷಣ : ಇಬ್ಬರ ವಿರುದ್ಧ ಪ್ರಕರಣ ದಾಖಲು…!!

ಉಡುಪಿ : ದ್ವೇಷ ಭಾಷಣ : ಇಬ್ಬರ ವಿರುದ್ಧ ಪ್ರಕರಣ ದಾಖಲು…!!

ಉಡುಪಿ : ದ್ವೇಷ ಭಾಷಣದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ‌ ಹಾಗೂ ಶರತ್ ಶೆಟ್ಟಿ ಇವರ ವಿರುದ್ಧ ಕೋಟ ಮತ್ತು ಬ್ರಹ್ಮಾವರ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ : ದ್ವೇಷ ಭಾಷಣದ ಬಗ್ಗೆ ಕೋಟ ಮತ್ತು ಬ್ರಹ್ಮಾವರ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.

1)ದಿನಾಂಕ 16-08-2025 ರಂಧು ಫೇಸ್ ಬುಕ್‌ ಪೇಜ್‌ ನಲ್ಲಿ ಆರೋಪಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್‌ ರವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿ ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇ಼ಷ ಭಾವನೆಯನ್ನು ಉಂಟು ಮಾಡಿರುವ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮಕ್ಕಾಗಿ ರಾಜೀವ ಕುಲಾಲ್, ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಳಾಧ್ಯಕ್ಷರು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 177/2025 US 196 (1),352, 353(2) BNSರಂತೆ ಆರೋಪಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

2)ಮಂಗಳೂರಿನ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಿನಾಂಕ: 09.08.2025 ರಂದು ಕೋಟ ವಸಂತ ಗಿಳಿಯಾರ್‌ ಎಂಬುವರ ಫೇಸ್‌ ಬುಕ್‌ ಖಾತೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಮ್ಯಾಪ್‌ನ್ನು ಆಳವಡಿಸಿ ಅಲ್ಲಿರುವ ದೇವಸ್ಥಾನ ಮತ್ತು ಮಸೀದಿಗಳ ಬಗ್ಗೆ ಒಂದು ಪೋಸ್ಟ್ ಹಾಕಿದ್ದು, ಧರ್ಮ ಧರ್ಮಗಳ ಮಧ್ಯ ,ಜಾತಿಗಳ ಮಧ್ಯ, ಸಮುದಾಯಗಳ ಮಧ್ಯ ಎತ್ತಿಕಟ್ಟಿ ಕೋಮು ಗಲಭೆಯನ್ನು ಸೃಷ್ಠಿಸುವಂತ ಧಾರ್ಮಿಕ ಸಂಸ್ಥೆಗಳ ಮೇಲೆ ದಾಳಿಗೆ ಪ್ರಚೋದಿಸುವಂತಹ ಸಂದೇಶವನ್ನು ವಿದ್ಯುನ್ನಾನ ಸಾಧನದ ಮೂಲಕ ಸಾಮಾಜಿಕ ಜಾಲತಾಣವಾದ ಪೇಸಬುಕ್‌ ನಲ್ಲಿ ಹರಿಯ ಬಿಟ್ಟಿರುವುದು ಮತ್ತು ಸಾಮಾಜಿಕ ಜಾಲತಾಣದಲ್ಲಿ ಕೆಂಪು ಮತ್ತು ನೀಲಿ ಬಣ್ಣದಲ್ಲಿ ಗುರುತು ಮಾಡಿದ ನಕ್ಷೆಯನ್ನು ಕೂಡ ಪ್ರಸಾರ ಮಾಡಿರುವ ಕುರಿತು ಅಪರಾಧ ಕ್ರಮಾಂಕ 84/25 ಕಲಂ. 196(1)(a), 353(2) BNSರಂತೆ ಪ್ರಕರಣ ದಾಖಲಾಗಿರುತ್ತದೆ.

ಇದೇ ಪೇಸ್‌ಬುಕ್‌ ಪೋಸ್ಟ್‌ನ್ನು ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶರತ್ ಶೆಟ್ಟಿ, ವಡ್ಡರ್ಸೆ ಎಂಬುವರು ರೀ ಪೊಸ್ಟ್‌ ಮಾಡಿದ್ದು, ಈ ಬಗ್ಗೆ ಕೋಟ ಪೊಲೀಸ್‌ ಠಾಣೆ ಜೀರೋ ಅಪರಾಧ ಕ್ರಮಾಂಕ : 01/2025 ಕಲಂ: 196(1)(a), 353(2) BNSರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.