Home Crime ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ – ಐದಕ್ಕೂ ಹೆಚ್ಚು ಅಂಗಡಿಗಳಿಗೆ...

ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ – ಐದಕ್ಕೂ ಹೆಚ್ಚು ಅಂಗಡಿಗಳಿಗೆ ಹಬ್ಬಿದ ಬೆಂಕಿ..!

ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಸಮೀಪದ ಖಾದರ್ ಬಿಲ್ಡಿಂಗ್‌ನಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಐದಕ್ಕೂ ಹೆಚ್ಚು ಅಂಗಡಿ ಮಳಿಗೆಗಳು ಅಗ್ನಿಗಾಹುತಿಯಾಗಿವೆ.

ಅಂಗಡಿಗಳಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಕವಾಗಿ ಹಬ್ಬಿ ಪಕ್ಕದ ಮಳಿಗೆಗಳಿಗೂ ತಗುಲಿದ ಪರಿಣಾಮ ವ್ಯಾಪಾರಿಗಳಿಗೆ ಭಾರೀ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಬೆಂಕಿ ಆರಿಸಲು ಯತ್ನಿಸಿದರೂ ಬೆಂಕಿಯ ತೀವ್ರತೆ ಹೆಚ್ಚಾಗುತ್ತಲೇ ಇದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ತಡವಾಗಿ ಆಗಮಿಸುತ್ತಿರುವುದರಿಂದ ಬೆಂಕಿ ಇನ್ನಷ್ಟು ಅಂಗಡಿಗಳಿಗೆ ಹಬ್ಬುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.