ಬೆಳ್ತಂಗಡಿ: ನೆರಿಯ ಗ್ರಾಮದ ನೆಕ್ಕರೆ ಎಂಬಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಪ್ಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಆರೋಪದಡಿ ಅಧಿಕಾರಿಗಳ ತಂಡ ದಾಳಿ ಮಂಗಳವಾರ ದಾಳಿ ನಡೆಸಿದೆ.
ನೆರಿಯ ಗ್ರಾಮದ ನೆಕ್ಕರೆ ಎಂಬಲ್ಲಿ ಪಟ್ಟಾ ಜಮೀನಿನಲ್ಲಿ ಕೃಷಿ ಉದ್ದೇಶಕ್ಕೆ ಅನುಮತಿ ಪಡೆದು ನದಿ ಪರಂಬೋಕು ಸೇರಿದಂತೆ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಸುಧಾ ನೇತೃತ್ವದಲ್ಲಿ ಗಣಿ, ಕಂದಾಯ, ಭೂಮಾಪನ, ಪೋಲಿಸ್ ಇಲಾಖೆಯ ಜಂಟಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ದಾಳಿ ಸಂದರ್ಭ ಎರಡು ಹಿಟಾಚಿ, ಒಂದು ಟಿಪ್ಪರ್, ಟ್ರ್ಯಾಕ್ಟರ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.