Home Karnataka News ಹಾಸನ: ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಹಠಾತ್ ಕುಸಿದು ಬಿದ್ದು ಸಾವು

ಹಾಸನ: ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಹಠಾತ್ ಕುಸಿದು ಬಿದ್ದು ಸಾವು

ಹಾಸನ : ಸಾಪ್ಟವೇರ್ ಕಂಪೆನಿಯ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ಮನೆಯಲ್ಲಿ ಹಠಾತ್ ಕುಸಿದು ಬಿದ್ದು ಕೋಮಾ ಸ್ಥಿತಿ ತಲುಪಿ ಸಾವನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ.

 

ಹಾಸನದ ಮ್ಯಾಗ್ನಾ ಸಾಫ್ಟ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ 25 ವರ್ಷದ ಯುವತಿ ಶ್ವೇತಾ ಅವರು ಮೆದುಳಿನಲ್ಲಿ ತೀವ್ರ ರಕ್ತಶ್ರಾವವಾಗಿ ಹಠಾತ್ ಸಾವನ್ನಪ್ಪಿದ್ದಾರೆ.

 

ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ನಿವಾಸಿಯಾದ ಶ್ವೇತಾ, ಹಾಸನದ ಮ್ಯಾಗ್ನಾ ಸಾಫ್ಟ್ ಕಂಪನಿಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಏಪ್ರಿಲ್ 25ರ ಶುಕ್ರವಾರ ಸಂಜೆ ಮನೆಯಲ್ಲಿದ್ದಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೋಮಾಗೆ ಜಾರಿದ್ದರು.

 

ಮೆದುಳು ನಿಷ್ಕ್ರಿಯಗೊಂಡ ಕಾರಣ (Brain Dead) ಶ್ವೇತಾ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದರು. ಈ ನೋವಿನ ಸಂದರ್ಭದಲ್ಲೂ ಶ್ವೇತಾ ಅವರ ಪೋಷಕರಾದ ಗಂಗಾಧರ್ ಮತ್ತು ಸರೋಜ ಅವರು ಮಗಳ ಅಂಗಾಂಗ ದಾನಕ್ಕೆ ಮುಂದಾಗಿದ್ದರು. ಆದರೆ ತಾಂತ್ರಿಕ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ. ಇಂದು ಶ್ವೇತಾ ಅವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿತು. ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯ ಹೊಂದಿದ್ದ ಯುವತಿಯ ಸಾವು ಅವರ ಕುಟುಂಬಸ್ತರಲ್ಲಿ ಹಾಗೂ ಸ್ನೇಹಿತರಲ್ಲಿ ತೀವ್ರ ದುಃಖ ತಂದಿದೆ.