Home Latest ಕುಂದಾಪುರ : ಬೈಕ್ ಕಳವು : ಸಿಸಿ ಟಿವಿಯಲ್ಲಿ ದೃಶ್ಯ ಸೆರೆ…!!

ಕುಂದಾಪುರ : ಬೈಕ್ ಕಳವು : ಸಿಸಿ ಟಿವಿಯಲ್ಲಿ ದೃಶ್ಯ ಸೆರೆ…!!

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಯೋಗೀಶ್ ಪೂಜಾರಿ ಎಂಬವರು ರೈಲ್ವೆ ನಿಲ್ದಾಣ ಬಳಿ ಬೈಕ್ ನಿಲ್ಲಿಸಿ ಹೋಗಿದ್ದು, ವಾಪಸ್ ಬರುವಾಗ ಕಳವಾಗಿತ್ತು.

ಪೊಲೀಸರು ತನಿಖೆ ನಡೆಸಿದಾಗ ಚೋರರು ಬೈಕ್ ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಪತ್ತೆಯಾಗಿದ್ದು, ಸಿಸಿಟಿವಿ ಫೂಟೇಜ್ ಆಧರಿಸಿ ಇಬ್ಬರು ಚೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.