Home Crime ಉಡುಪಿ : ತಿಮರೋಡಿ ವಿರುದ್ಧ ಜಾಮೀನು ರಹಿತ ಕೇಸ್ : ಎಸ್.ಪಿ ಹರಿರಾಮ್ ಶಂಕರ್…!!

ಉಡುಪಿ : ತಿಮರೋಡಿ ವಿರುದ್ಧ ಜಾಮೀನು ರಹಿತ ಕೇಸ್ : ಎಸ್.ಪಿ ಹರಿರಾಮ್ ಶಂಕರ್…!!

ಉಡುಪಿ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ತಿಮರೋಡಿ ವಿರುದ್ದ ಜಾಮೀನು ರಹಿತ ಕೇಸುಗಳಿದ್ದು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಲಾಗಿತ್ತು. ಆದರೆ, ವಿಚಾರಣೆಗೆ ಹಾಜರಾಗದ ಕಾರಣ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ತಿಮರೋಡಿಯ ವಿಚಾರಣೆ ನಡೆಯುತ್ತಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ನಿಂದಿಸಿ, ಅವಹೇಳನ ಮಾಡಿರುವ ಆರೋಪದಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೊ ಮಾಡಿ ಮಹೇಶ್ ಶೆಟ್ಟಿ ತಿಮರೋಡಿ ಸಂತೋಷ್ ಅವರನ್ನು ಅವಹೇಳನ ಮಾಡಿ, ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.