Home Crime ಪಡುಬಿದ್ರಿ : ನ್ಯಾಯಾಲಯಕ್ಕೆ ಹಾಜರಾಗದೆ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!

ಪಡುಬಿದ್ರಿ : ನ್ಯಾಯಾಲಯಕ್ಕೆ ಹಾಜರಾಗದೆ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!

ಪಡುಬಿದ್ರೆ : ಕಳವು ಮತ್ತು ಕದ್ದ ಸೊತ್ತುಗಳನ್ನು ಸ್ವಾಧೀನ ಇರಿಸಿಕೊಂಡಿದ್ದ ಆರೋಪದ ಮೇಲೆ ಬಂಧಿತನಾಗಿ ಜಾಮೀನಿನ ಮೇಲೆ ನ್ಯಾಯಾಂಗ ಬಂಧನದಿಂದ ಹೊರ ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಏಳು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಮೈಸೂರು ಜಿಲ್ಲೆಯ ಉದಯಗಿರಿ ಶಾಂತಿನಗರ ಆರನೇ ಕ್ರಾಸ್ ನಿವಾಸಿ ಫೈರೋಜ್ ಖಾನ್ ಎಂಬಾತನನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.

2017 ರಲ್ಲಿ ಈತನ ವಿರುದ್ಧ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 2018 ರಲ್ಲಿ ಜಾಮೀನಿನಲ್ಲಿ ಬಿಡುಗಡೆಯಾದ ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿದ್ದನು. ಕೇರಳ ರಾಜ್ಯದಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ಪಡೆದ ಪಡುಬಿದ್ರೆ ಠಾಣೆಯ ಪೊಲೀಸರು ಕಲ್ಲಿಕೋಟೆಯಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹೆಡ್‌ ಕಾನ್‌ಸ್ಟೆಬಲ್‌ ಗಳಾದ ದೇವರಾಜ್ ಮತ್ತು ರಾಘು ಶೆಟ್ಟಿ ಅವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.