ಬಂಟ್ವಾಳ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತ ದುರ್ದೈವಿಯನ್ನು ಗಣೇಶ್ ಆಚಾರ್ಯ(42) ಎಂದು ಗುರುತಿಸಲಾಗಿದೆ.
ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಆಚಾರ್ಯ ಅವರು, ಆ.20ರಂದು ತನ್ನ ಮನೆ ಸಮೀಪದಲ್ಲಿ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.