Home Latest ಉಡುಪಿ: ಅಕ್ರಮ ಹೋಂಸ್ಟೇಗಳ ವಿರುದ್ಧ ಕಾರ್ಯಾಚರಣೆ; 39 ಅನಧಿಕೃತ ಹೋಂಸ್ಟೇ ಪತ್ತೆ – ಎಸ್‌ಪಿ ಹರಿರಾಂ...

ಉಡುಪಿ: ಅಕ್ರಮ ಹೋಂಸ್ಟೇಗಳ ವಿರುದ್ಧ ಕಾರ್ಯಾಚರಣೆ; 39 ಅನಧಿಕೃತ ಹೋಂಸ್ಟೇ ಪತ್ತೆ – ಎಸ್‌ಪಿ ಹರಿರಾಂ ಶಂಕರ್ ಮಾಹಿತಿ..!!

ಉಡುಪಿ, ಏ.28: ಕೊಡಗು ಜಿಲ್ಲೆಯ ಹೋಂಸ್ಟೇಯಲ್ಲಿ ನಡೆದ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಹಿನ್ನೆಲೆ ರಾಜ್ಯದಾದ್ಯಂತ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದ್ದು, ಅದರ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ತಿಳಿಸಿದ್ದಾರೆ.

ಪೊಲೀಸ್ ಮಹಾನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಹೋಂಸ್ಟೇ ಮತ್ತು ರೆಸಾರ್ಟ್‌ಗಳ ಪರಿಶೀಲನೆ ನಡೆಸಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ಒಟ್ಟು 39 ಅನಧಿಕೃತ ಹೋಂಸ್ಟೇ/ರೆಸಾರ್ಟ್‌ಗಳು ಪತ್ತೆಯಾಗಿವೆ.

ಈ ಪೈಕಿ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16, ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 8 ಘಟಕಗಳು ಸೇರಿವೆ. ಪತ್ತೆಯಾದ ಎಲ್ಲಾ ಅಕ್ರಮ ಹೋಂಸ್ಟೇ ಮತ್ತು ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ವರದಿ ಸಲ್ಲಿಸಲಾಗಿದೆ.

ಜಿಲ್ಲೆಯಲ್ಲಿ ಅನಧಿಕೃತ ಪ್ರವಾಸೋದ್ಯಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.