ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಾರಂಭವಾಗುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ (ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗ) ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಜಿದಾರರು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಅಲ್ಪಸಂಖ್ಯಾತರ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, ನೆಲ ಮಹಡಿ, ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ತಾಲೂಕು ಪಂಚಾಯತ್ ರೋಡ್, ಕುಂದಾಪುರ ಇಲ್ಲಿ ಮೇ 16 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಸಂತೋಷ್ ಬಿ.ಡಿ ಮೊ.ನಂ: 8762434245 ಹಾಗೂ ಕುಂದಾಪುರ ಮಾಹಿತಿ ಕೇಂದ್ರದ ಸಿಬ್ಬಂದಿ ಸಂಜಯ್ ಮೊ.ನಂ: 9535389972 ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.





