Home Latest ಉಡುಪಿ: ಮೇ 01 – ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಮೆರವಣಿಗೆ..!

ಉಡುಪಿ: ಮೇ 01 – ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಮೆರವಣಿಗೆ..!

ಉಡುಪಿ: ನಾಲ್ಕು ಲೇಬರ್ ಕೋಡ್‌ಗಳ ವಿರುದ್ಧ, ಸಾಮ್ರಾಜ್ಯಶಾಹಿ ಯುಎಸ್ ಯುದ್ಧ ನೀತಿ ಹಾಗೂ ಬೆಲೆ ಏರಿಕೆಯ ವಿರುದ್ಧವಾಗಿ 2026ರ ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಉಡುಪಿ ಜಿಲ್ಲೆಯಲ್ಲಿ ಭಾರೀ ಮೆರವಣಿಗೆಯೊಂದಿಗೆ ಆಚರಿಸಲಾಗುತ್ತದೆ.

ಅಂದು ಬೆಳಿಗ್ಗೆ 9.15ಕ್ಕೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿಂದ ಮೆರವಣಿಗೆ ಪ್ರಾರಂಭವಾಗಲಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸುವ ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕ್ಯಾಶು ಕಾರ್ಮಿಕರು, ಅಂಗನವಾಡಿ ಸಿಬ್ಬಂದಿ, ಮೀನುಗಾರರು, ಸೆಕ್ಯುರಿಟಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಜನರಲ್ ವರ್ಕರ್ಸ್ ಹಾಗೂ ಅಕ್ಷರ ದಾಸೋಹ ನೌಕರರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಮೆರವಣಿಗೆಯ ನಂತರ ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದ್ದು, ಮಧ್ಯಾಹ್ನ 12.30ಕ್ಕೆ ಸಮಾಪ್ತಿಯಾಗಲಿದೆ. ಸಭೆಯನ್ನು ಉದ್ದೇಶಿಸಿ ಸಿಐಟಿಯು ರಾಜ್ಯ ಹಿರಿಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಲಿದ್ದಾರೆ. ಜೊತೆಗೆ ವಿವಿಧ ಸಂಘಟನೆಗಳ ಮುಖಂಡರು ವೇದಿಕೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ.

ಕಾರ್ಕಳದ ಬಂಡಿಮಠ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ 10 ಗಂಟೆಗೆ ಮೇ ದಿನಾಚರಣೆ ನಡೆಯಲಿದೆ. ಅಕ್ಷರ ದಾಸೋಹ, ಕಟ್ಟಡ, ಲೇಮಿನ ಹಾಗೂ ಬೀಡಿ ಕಾರ್ಮಿಕರು ಭಾಗವಹಿಸಲಿದ್ದಾರೆ.

ಬ್ರಹ್ಮಾವರದಲ್ಲಿ ಮಧ್ಯಾಹ್ನ 3 ಗಂಟೆಗೆ ಮತ್ತು ಸಾಲಿಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಗೆ ಮೇ ದಿನಾಚರಣೆ ನಡೆಯಲಿದ್ದು, ಅಂಗನವಾಡಿ, ಆಟೋರಿಕ್ಷಾ, ಅಕ್ಷರ ದಾಸೋಹ, ಬೀಡಿ ಮತ್ತು ಕಟ್ಟಡ ಕಾರ್ಮಿಕರು ಭಾಗವಹಿಸಲಿದ್ದಾರೆ.ಈ ಕುರಿತು ಪ್ರಕಟಣೆ ತಿಳಿಸಿದೆ.