Home Crime ಬೈಂದೂರು: ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!

ಬೈಂದೂರು: ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!

ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಭೀಕರ ಅಪಘಾತ ರಾತ್ರಿ ಸಂಭವಿಸಿದೆ.

ಏಪ್ರಿಲ್ 28 ರಂದು ಸುಮಾರು 8:40ಕ್ಕೆ ಕೃಷ್ಣ ಪೂಜಾರಿ (34) ಅವರು ಮೋಟಾರ್ ಸೈಕಲ್‌ನಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ತೆರಳುತ್ತಿದ್ದರು. ಕಂಬದಕೋಣೆ ಗ್ರಾಮದ ಒಡಲ ವಿಠ್ಠಲ್ ಗಣಪತಿ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರ ಪಶ್ಚಿಮ ಪಥದಲ್ಲಿ ಸಾಗುತ್ತಿದ್ದ ವೇಳೆ, ಅದೇ ದಿಕ್ಕಿನಿಂದ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಲಾರಿ ಚಾಲಕನು ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಮೋಟಾರ್ ಸೈಕಲ್ ಅನ್ನು ಹಿಂದಿಕ್ಕಿ ಮುಂದೆ ಸಾಗುವ ವೇಳೆ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಕೃಷ್ಣ ಪೂಜಾರಿ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಮೃತರ ತಲೆ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಅಪಘಾತದ ಬಳಿಕ ಲಾರಿ ಚಾಲಕನು ಯಾವುದೇ ಮಾಹಿತಿ ನೀಡದೇ, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನವೂ ಮಾಡದೇ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.