ಕಾರ್ಕಳ: ಇಲಿ ಪಾಶಣ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.
ನಿಟ್ಟೆ ಗ್ರಾಮದ ರಾಜೇಶ್ ಶೆಟ್ಟಿ (45) ಅವರ ತಮ್ಮ ಸದಾನಂದ ಶೆಟ್ಟಿ (42) ಅವರು ಅವಿವಾಹಿತರಾಗಿದ್ದು ಒಬ್ಬಂಟಿಯಾಗಿ ವಾಸವಾಗಿದ್ದರು. ಅವರಿಗೆ ವಿಪರೀತ ಮದ್ಯಪಾನದ ಚಟವಿದ್ದು, ಇದೇ ಕಾರಣದಿಂದ ದಿನಾಂಕ 23/04/2026ರಂದು ಸಂಜೆ 6:30ರ ಸುಮಾರಿಗೆ ಮನೆಯಲ್ಲಿ ಇಲಿ ಪಾಶಣ ಸೇವಿಸಿದ್ದರೆಂದು ತಿಳಿದುಬಂದಿದೆ.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಾರ್ಕಳ ಸಿಟಿ ಆಸ್ಪತ್ರೆಗೆ ಹಾಗೂ ಅಲ್ಲಿಂದ ಮುಕ್ಕ ಶ್ರೀನಿವಾಸ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಸದಾನಂದ ಶೆಟ್ಟಿ ಅವರು ಚಿಕಿತ್ಸೆಗೆ ಸ್ಪಂದಿಸದೆ ದಿನಾಂಕ 28/04/2026ರಂದು ಬೆಳಿಗ್ಗೆ 5:34ಕ್ಕೆ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




