Home Crime ಕಾಸರಗೋಡು: ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೈದ ಆರೋಪಿ ಅರೆಸ್ಟ್

ಕಾಸರಗೋಡು: ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೈದ ಆರೋಪಿ ಅರೆಸ್ಟ್

ಕಾಸರಗೋಡು: ಕುಂಬಳೆ ಸೀತಾಂಗೋಳಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಆತನನ್ನು ತಲೆಗೆ ಬಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕುಂಬಳೆ ಕೋಟೆಕ್ಕಾರಿನ ಶ್ರೀನಿವಾಸ (39) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಮುಂಡಿತ್ತಡ್ಕ ಬಾಪಲಿಪೋನ ಪಾಡ್ಲಡ್ಕದ ಸಫಾಯಿದ್ (30) ಕೊಲೆಯಾದವರು ಎಂದು‌ ತಿಳಿದು ಬಂದಿದೆ.

ಸೀತಾಂಗೋಳಿ ಪೇಟೆ ಸಮೀಪದ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿತ್ತು.

ಪೂರ್ವ ದ್ವೇಷವೇ ಕೃತ್ಯಕ್ಕೆ ಕಾರಣ ಎನ್ನಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ಮರದ ತುಂಡನ್ನು ಪೊಲೀಸರು ಸ್ಥಳದಿಂದ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.