ಉಡುಪಿ : ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಕರ್ನಾಟಕ ರಾಜ್ಯ ಮಟ್ಟದ ಕಿರಿಯ ಹಾಗೂ 23 ವರ್ಷದೊಳಗಿನ ಅಥ್ಲೆಟಿಕ್ ಮೀಟ್-2025 ಕ್ರೀಡಾಕೂಟಕ್ಕೆ ಉಡುಪಿಯ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗೃಹ ಸಚಿವ, ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು.
ಈ ವೇಳೆ ಮಣಿಪಾಲ ಮಾಹೆಯ ಪ್ರೊ. ಚಾನ್ಸಲರ್ ಡಾ. ಹೆಚ್.ಎಸ್ ಬಲ್ಲಾಳ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘಟನಾ ಸಮಿತಿ ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ರಘುಪತಿ ಭಟ್, ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಸಂಸ್ಥೆಯ ರಾಜ್ಯ ಉಪಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ ಮೊದಲಾದವರು ಉಪಸ್ಥಿತರಿದ್ದರು.

