ಉಡುಪಿ : ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಸಿಕ್ಕಿರುವುದು ಹೋರಾಟದ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ.
ಹಿಂದೂ ಪರ ಮುಖಂಡ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಪಡೆದು ಹೊರ ಬರುತ್ತಿದ್ದಂತೆ ಉಡುಪಿಯಲ್ಲಿ ಗಿರೀಶ್ ಮಟ್ಟಣ್ಣನವರ್ ಪ್ರತಿಕ್ರಿಯಿಸಿದ್ದಾರೆ.
ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಸೇರಿದಂತೆ ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವಿನ ಪ್ರಕರಣಗಳ ಬಗ್ಗೆ ಕಳೆದ 13 ವರ್ಷಗಳಿಂದ ತಿಮರೋಡಿ ಅವರು ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ಜಯ ಸಿಕ್ಕಿದೆ. ಮಹೇಶ್ ಶೆಟ್ಟಿ ತಿಮರೋಡಿ ಜಾಮೀನಿಗೆ ಶ್ರಮಿಸಿದ ಉಡುಪಿಯ ಎಲ್ಲಾ ನ್ಯಾಯವಾದಿಗಳಿಗೂ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.